ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಪಡು ಪೆರೆರಾ ಪಂಚಾಯತ್ ಸದಸ್ಯ ನೂರ್ ಅಹ್ಮದ್  ಮೇಲೆ ಬಿಜೆಪಿ ಮುಖಂಡ ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ರಾಡ್‌ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ‌ ಕೊಲೆ ಬೆದರಿಕೆ ಹಾಕಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸುತ್ತಿರುವ ಸ್ಥಳಕ್ಕೆ ಪಿಡಿಒ ಪ್ರಮೋದ್ ಅವರೊಂದಿಗೆ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.

ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆದಾರ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ. ನೂರ್ ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here