ಮಂಗಳೂರು: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆಯಲ್ಲಿ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬಾಗಲಕೋಟೆ ಮೂಲದ ಅಖಿಲ್ ಮತ್ತು ಬೆಂಗಳೂರು ಮೂಲದ ಹೇಮಾ ಪರಸ್ಪರ ಪ್ರೀತಿಸುತ್ತಿದ್ದು, ಬಾಳುವುದಾದರೆ ಇಬ್ಬರು ಜೊತೆಗೆ ಬಾಳುವ ಎಂದು ಮದುವೆಯಾಗಲು ನಿರ್ಧರಿಸಿದ್ದರು.
ಆದರೆ ಇಬ್ಬರ ಮನೆಯಲ್ಲೂ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ನೊಂದ ಅಖಿಲ್ ಮತ್ತು ಹೇಮಾ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಮುಂಬೈ ಬಸ್ ಹತ್ತಿದ ಪ್ರೇಮಿಗಳು ವಿಷ ಸೇವಿಸಿ ಮಲಗಿದ್ದಾರೆ. ಮಾರ್ಗ ಮಧ್ಯೆ ಊಟಕ್ಕೆಂದು ಬಸ್ಸು ನಿಲ್ಲಿಸಿದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಪ್ರಯಾಣಿಕರು ಮತ್ತು ಸ್ಥಳೀಯರ ಸಹಕಾರದಿಂದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೇಮಾ ಅದಾಗಲೇ ಕೊನೆಯುಸಿರೆಳೆದಿದ್ದರು. ಅಖಿಲ್ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದ ಚಳಗೇರಿಯ ಬಳಿ ಐದು ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.