ತೆರವಾಗಿರುವ ವಿಧಾನಪರಿಷತ್ ಸ್ಥಾನಕ್ಕೆ ಉಪಚುನಾವಣೆ ಘೋಷಣೆ

ಮಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಜೂ.30 ರಂದು ಉಪಚುನಾವಣೆ ನಡೆಯಲಿರುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.

ಉಪ ಚುನಾವಣೆಗೆ ಜೂ.13 ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಜೂ.20 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಜೂ.21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂ.23 ರವರೆಗೆ ನಾಮಪತ್ರ ಹಿಂಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜೂ.30 ರಂದು ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:00 ವರೆಗೆ ಮತದಾನ ನಡೆಯಲಿದ್ದು, ಸಂಜೆ ಐದು ಗಂಟೆಯ ನಂತರ ಮತಗಳ ಎಣಿಕೆ ಕಾರ್ಯ ನಡೆಸಿ ಅಂದೇ ಫಲಿತಾಂಶ ಪ್ರಕಟವಾಗಲಿದೆ. ಬಾಬುರಾವ್ ಚಿಂಚನಸೂರ್, ಆರ್ ಶಂಕರ್, ಲಕ್ಷ್ಮಣ ಸವದಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here