ಮಂಗಳೂರು: ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ನೀರಿನ ಸಮಸ್ಯೆಯನ್ನು ಎದುರಿಸಲಾಗದೆ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿ ಆಡಳಿತ ಮಂಡಳಿ ರಜೆ ಘೋಷಿಸಿದೆ.
ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವ ಕಾಲೇಜು ಆಡಳಿತ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ನಡೆಸಲು ತೀರ್ಮಾನಿಸಿದೆ. ಶೌಚಾಲಯ ಸೇರಿದಂತೆ ಇತರ ಉಪಯೋಗಕ್ಕೆ ನೀರಿನ ಕೊರತೆಯಾಗಿದ್ದು, ಕಾಲೇಜಿನ 1800 ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ನೀರಿನ ಕೊರತೆಯಿಂದಾಗಿ ರಜೆ ಘೋಷಿಸಲಾಗಿದೆ. ಕೆಲವೆಡೆ ಅರ್ಧ ದಿನ ಮಾತ್ರ ತರಗತಿಗಳು ನಡೆಯುತ್ತಿದೆ.