ಮಂಗಳೂರು : 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳ ಕುರಿತು ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಬಗ್ಗೆ ಸದಾನಂದ ಗೌಡರು ಚಿಂತೆ ಮಾಡಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಪಕ್ಷ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಚುನಾವಣೆ ಸಮೀಪಿಸಿದಾಗ ಅಭ್ಯರ್ಥಿಗಳನ್ನು ನಿರ್ಧರಿಸಲಾಗುತ್ತದೆ. ಪಕ್ಷದ ವರಿಷ್ಠರ ಅಭ್ಯರ್ಥಿಗಳನ್ನು ನಿರ್ಧರಿಸುತ್ತಾರೆ ಹೊರತು ಮಾಧ್ಯಮಗಳಲ್ಲ ಎಂದು ಅವರು ಹೇಳಿದ್ದಾರೆ.
ಜೂನ್ ಏಳರಂದು ದೆಹಲಿಯಲ್ಲಿ ಸದಾನಂದ ಗೌಡರ ಹೇಳಿಕೆ ಕುರಿತು ಪ್ರತಿಕ್ರಿಸಿದ ಜೋಶಿ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸದಾನಂದ ಗೌಡರು ರಾಜ್ಯ ಹಾಗೂ ಕೇಂದ್ರ ಸರಕಾರಗಳಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ, ಅವರಂತ ಹಿರಿಯ ನಾಯಕರು ಆತಂಕ ಪಡಬೇಕಾಗಿಲ್ಲ. ಪಕ್ಷ ಸದಾ ಗೌಡರ ಜೊತೆಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.