ಜಾನುವಾರು ಹತ್ಯೆ ಕಾಯ್ದೆ ಸೇರಿ ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ – ಸಿಎಂ ಸಿದ್ದರಾಮಯ್ಯ

ಮಂಗಳೂರು: ಜಾನುವಾರು ಹತ್ಯೆ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ಸೇರಿದಂತೆ ಇನ್ನಿತರ ಕಾಯ್ದೆಗಳನ್ನು ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜೂನ್ 7ರಂದು ಗ್ರಹ ಕಚೇರಿ ಕೃಷ್ಣದಲ್ಲಿ ತಮ್ಮನ್ನು ಭೇಟಿ ಮಾಡಿದ ವಿವಿಧ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದ ಸಿಎಂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ನೀತಿ ನಿಯಮಾವಳಿಗಳ ಕುರಿತು ವಿವರವಾಗಿ ಪ್ರತ್ಯೇಕವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುವುದಾಗಿ ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸರಕಾರವು ಕಾರ್ಪೊರೇಟ್ ಕೃಷಿಯನ್ನು ಪರಿಚಯಿಸುವುದರಿಂದ ಶೇಕಡ 85ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ರೈತನಾಯಕ ಬಡಗಲಪುರ ನಾಗೇಂದ್ರ ಚಾಮರಸ ಮಾಲಿ ಪಾಟೀಲ್, ಜಿ ಸು ಭಯ್ಯಾ ರೆಡ್ಡಿ, ಎಚ್ ಆರ್ ಬಸವರಾಜಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here