ಮಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ, ಆನೇಕಲ್ ಯೋಜನಾ ಪ್ರಾಧಿಕಾರ, ಹೊಸಕೋಟೆ ಯೋಜನಾ ಪ್ರಾಧಿಕಾರ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ, ಮಾಗಡಿ ಯೋಜನಾ ಪ್ರಾಧಿಕಾರ, ಚನ್ನಪಟ್ಟಣ ಯೋಜನಾ ಪ್ರಾಧಿಕಾರ, ಕನಕಪುರ ಯೋಜನಾ ಪ್ರಾಧಿಕಾರ, ನೆಲಮಂಗಲ ಯೋಜನಾ ಪ್ರಾಧಿಕಾರ, ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ ಮತ್ತು ಗ್ರೇಟರ್ ಬೆಂಗಳೂರು – ಬಿಡದಿ ಸ್ಮಾರ್ಟ್ ಸಿಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಸರಕಾರ ಆದೇಶಿಸಿದೆ.
ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ನಡುವೆ ನಡೆದಿದ್ದ ಪೈಪೋಟಿಗೆ ರಾಜ್ಯ ಸರಕಾರ ಬ್ರೇಕ್ ಹಾಕಿದ್ದು ಐಎಎಸ್ ಅಧಿಕಾರಿಯನ್ನು ಬಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.