ಜೂನ್ 11ರಂದು ಬಸ್ ಕಂಡಕ್ಟರ್ ಆಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಕಾಂಗ್ರೆಸ್ ಸರಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸ್ ಕಂಡಕ್ಟರ್ ಆಗಿ ಬದಲಾಗಲಿದ್ದಾರೆ.
ಜೂನ್ 11ರಂದು ಬೆಂಗಳೂರಿನ ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ ತೆರಳುವ ಮಾರ್ಗ ಸಂಖ್ಯೆ 43ರ ಬಿಎಂಟಿಸಿ ಬಸ್ಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ಟ್ ಟೈಮ್ ಕಂಡಕ್ಟರ್ ಆಗಿ ಮಹಿಳಾ ಪ್ರಯಾಣಿಕರ ಬಳಿ ತೆರಳಿ ಟಿಕೆಟ್, ಟಿಕೆಟ್ ಎನ್ನುತ್ತಾ ಉಚಿತ ಟಿಕೇಟು ವಿತರಿಸುವ ಮೂಲಕ ಶಕ್ತಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ರಾಷ್ಟ್ರದ ಗಮನ ಸೆಳೆದಿರುವ ಗ್ಯಾರಂಟಿ ಯೋಜನೆಗಳ ಉದ್ಘಾಟನೆಯು ಭಿನ್ನವಾಗಿರಬೇಕು ಎಂಬ ಯೋಚನೆಯಿಂದ ಈ ರೀತಿ ಕಾರ್ಯಕ್ರಮವನ್ನು ರೂಪಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here