ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 11ರಂದು ಮಂಗಳೂರಿಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್‌ 11ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಲಿರುವ ಸಚಿವರು ಮಧ್ಯಾಹ್ನ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸಂಜೆ 3 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ರಾತ್ರಿ ಮತ್ತೆ ಬೆಂಗಳೂರಿಗೆ ತೆರಳಿದ್ದಾರೆ.

LEAVE A REPLY

Please enter your comment!
Please enter your name here