ಮಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಿಂದ ಇಣುಕಿ ನೋಡುತ್ತಿದ್ದ ಕಾಮುಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಂಗಳೂರಿನ ಮಾರತಹಳ್ಳಿಯ ಮುನ್ನೇನಕೊಳಲುನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಯುವಕನನ್ನು ನಿತಿನ್ ಎಂದು ಗುರುತಿಸಲಾಗಿದೆ.
ಬಾಡಿಗೆ ಮನೆಯಲ್ಲಿರುವ ನಿತಿನ್ ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಬಳಿಕ ಸ್ಥಳೀಯರು ನೀತಿನ್ ಹಿಡಿದು ಮಾರತಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.