ರೈಲು ಹಳಿಗೆ ತಲೆಕೊಟ್ಟ ವ್ಯಕ್ತಿಯನ್ನು ರಕ್ಷಿಸಿದ ರೈಲ್ವೆ ಪೊಲೀಸ್ ಮಹಿಳಾ ಸಿಬ್ಬಂದಿ

ಮಂಗಳೂರು: ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ರಕ್ಷಿಸಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಹಠಾತ್ತನೇ ಹಳಿಗೆ ತಲೆ ಕೊಟ್ಟು ಮಲಗಿದ್ದಾರೆ. ಇದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ತಕ್ಷಣ ಟ್ರ್ಯಾಕ್ ಗಿಳಿದು ಪಕ್ಕಕ್ಕೆ ಸರಿಸುವ ಮೂಲಕ ಅವರ ಪ್ರಾಣ ಕಾಪಾಡಿದ್ದಾರೆ. ಈ ವೇಳೆ ಪ್ಲ್ಯಾಟ್ ಫಾರ್ಮ್ ನಲ್ಲಿದ್ದ ಇನ್ನಿಬ್ಬರು ಸಿಬ್ಬಂದಿ ನೆರವಿಗೆ ದಾವಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವೈರಲ್ ಆಗಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here