ಮಂಗಳೂರು : ಮಡಿಕೇರಿ ಹೊರವಲಯದ ಹುಡೋತ್ ಮೊಟ್ಟೆಯ ಪಪ್ಪಿಸ್ ಪ್ಲಾಂಟೇಶನ್ ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಜ್ ಈಗ ಪ್ರವಾಸಿಗರ ಗಮನ ಸೆಳೆಯುತ್ತಿದೆ.
ಸುಮಾರು ಐದು ಟನ್ ಬಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40 ರಿಂದ 50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಇದನ್ನು ಉದ್ಘಾಟಿಸಿದರು. ಈ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದ್ದು ಜೊತೆಗೆ ಅವಲಂಬಿತರಿಗೆ ಉದ್ಯೋಗಾವಕಾಶ ದೊರೆಯಲಿದೆ ಎನ್ನಲಾಗಿದೆ.