ಮಂಗಳೂರು : ಬೈಕಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೋಟೆಕಾರ್ ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ.
ಕಳೆದ ಜೂ.4ರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಣಿಯ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ ನ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಮರುದಿನ ಘಟನೆಗೆ ಕಾರಣವಾದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದರು.
ಗಂಭೀರ ಗಾಯಗೊಂಡಿದ್ದ ತೇಜಸ್ ನನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಬಳಿಕ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ತಲೆಗೆ ಗಂಭೀರ ಗಾಯವಾಗಿ ಕೋಮಾ ಸ್ಥಿತಿಯಲ್ಲಿದ್ದ ತೇಜಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತೇಜಸ್ ಭಜರಂಗದಳದ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.