ಶಕ್ತಿ ಯೋಜನೆ 2ನೇ ದಿನ 41.34 ಲಕ್ಷ ಮಹಿಳೆಯರ ಪ್ರಯಾಣ

ಮಂಗಳೂರು: ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ದೊರಕಿದೆ. ಎರಡನೆಯ ದಿನ 41.34 ಲಕ್ಷ ಮಹಿಳೆಯರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ.

ಸಾರಿಗೆ ಇಲಾಖೆ ಈ ಸಂಬಂಧ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು ಜೂನ್ 12 ಮಧ್ಯರಾತ್ರಿ 12 ಗಂಟೆಯವರೆಗೆ ಒಟ್ಟು 41,34,726 ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸಿದ್ದು ಶೂನ್ಯ ಟಿಕೆಟ್ ಪ್ರಯಾಣದ ಮೊತ್ತ ಒಟ್ಟು 8,83,53,434 ರೂಪಾಯಿಗಳು ಎಂದು ತಿಳಿಸಲಾಗಿದೆ.

LEAVE A REPLY

Please enter your comment!
Please enter your name here