ಸಂಪುಟ ಸಭೆ – ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ, ಪಠ್ಯ ಪರಿಷ್ಕರಣೆಗೆ ಸರ್ಕಾರ ನಿರ್ಧಾರ

ಮಂಗಳೂರು(ಬೆಂಗಳೂರು): ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಪಠ್ಯ ಪುಸ್ತಕ ಪರಿಷ್ಕರಣೆಗೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದೆ. ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಆಗಲಿದೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್, ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗುವುದು. ಪಠ್ಯಪುಸ್ತಕ ಪರಿಷ್ಕರಣೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಎಪಿಎಂಸಿ ಕಾನೂನು ಹಿಂಪಡೆಯಲು ಸಹ ಸರ್ಕಾರ ನಿರ್ಧರಿಸಿದೆ. ಸಣ್ಣ ನೀರಾವರಿ ಇಲಾಖೆ ಪ್ರಸ್ತಾವನೆಗೆ ಸಂಪುಟ ಅನುಮೋದಿಸಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 83 ಕೆರೆಗಳ ಭರ್ತಿ ಮಾಡುವುದು. 1081 ಕೋಟಿ ವೆಚ್ಚದಲ್ಲಿ ವೃಷಭಾವತಿ ನಾಲೆ ನೀರು ಶುದ್ಧೀಕರಿಸಿದ ನೀರನ್ನು ಕೆರೆಗಳಿಗೆ ಹರಿಸಲು ಸಂಪುಟ ಸಮ್ಮತಿಸಿದೆ ಎಂದು ಪಾಟೀಲ್ ಹೇಳಿದರು. ವಿಪತ್ತು ನಿರ್ವಹಣೆ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ ಮಾಡಿದ್ದು, ಸಾರಿಗೆ ನಿಗಮಗಳ 79 ಕೋಟಿ ರೂ. ಮೋಟಾರ್ ವೆಹಿಕಲ್ ಟ್ಯಾಕ್ಸ್ ವಿನಾಯಿತಿಗೆ ತೀರ್ಮಾನಿಸಲಾಗಿದೆ.

ಇದೇ ವೇಳೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಆರ್‌ಎಸ್ಎಸ್ ಸಂಸ್ಥಾಪಕ ಕೇಶವ ಹೆಡ್ಗೇವಾರ್ ಭಾಷಣ ತೆಗೆದಿದ್ದೇವೆ. ಸಾವರ್ಕರ್, ಚಕ್ರವರ್ತಿ ಸೂಲಿಬೆಲೆ ಬರೆದ ಅಂಶಗಳನ್ನು ಸಹ ತೆಗೆದಿದ್ದೇವೆ. ಮಕ್ಕಳು ಸರಿಯಾದ ವಿಚಾರ ಕಲಿಯಬೇಕೆಂದು ಕೆಲ ಬದಲಾವಣೆ ಮಾಡಿದ್ದೇವೆ. ನಾವು ತುಂಬಾ ಆಳವಾಗಿ ಹೋಗಬೇಕಾಗಿತ್ತು, ಹಾಗೆ ಮಾಡಿಲ್ಲ. ಯಾರಿಗೂ ಹೊರೆಯಾಗದಂತೆ ಸರಳವಾಗಿ ಪಠ್ಯ ಪರಿಷ್ಕರಿಸಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here