ರಾಜ್ಯ ಸರಕಾರದಿಂದ ʼಡೇರ್‌ ಡೆವಿಲ್‌ ಮುಸ್ತಾಫಾʼ ಚಿತ್ರಕ್ಕೆ ತೆರಿಗೆ ವಿನಾಯಿತಿ

ಮಂಗಳೂರು(ಬೆಂಗಳೂರು): ರಾಜ್ಯ ಕಾಂಗ್ರೆಸ್‌ ಸರಕಾರ ʼಡೇರ್‌ ಡೆವಿಲ್‌ ಮುಸ್ತಾಫಾʼ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

ಈ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ, ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ ಪಿ ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ  ʼಡೇರ್‌ ಡೆವಿಲ್‌ ಮುಸ್ತಾಫಾʼ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ. ಇಂದಿನ ಕಾಲಘಟ್ಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸ್ಸುಗಳು. ಇಂತಹದ್ದೊಂದು ಕಾರ್ಯಕ್ಕೆ ಕೈ ಹಾಕಿದ ಚಿತ್ರ ತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮನಿಮ್ಮೆಲ್ಲರ ಬೆಂಬಲವಿರಲಿ ಎಂದು ಟ್ವಿಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here