ಹೊತ್ತಿ ಉರಿದ ಶಾಲಾ ಬಸ್ಸು-ತಪ್ಪಿದ ಅನಾಹುತ

ಮಂಗಳೂರು: ಶಾಲಾ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ವಿಜಯನಗರ ಜಿಲ್ಲೆಯ ಕೆ ಅಯ್ಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಜಿಲ್ಲೆಯ ಹೊಸಪೇಟೆ ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮದ ಬಳಿ ಖಾಸಗಿ ಶಾಲೆಗೆ ಸೇರಿದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಹೊಗೆ ಕಾಣಿಸಿಕೊಂಡಿದ್ದು, ಚಾಲಕ ಮತ್ತು ಸಿಬ್ಬಂದಿ ತಕ್ಷಣ ಮಕ್ಕಳನ್ನು ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಬಗ್ಗೆ ವಿಷಯ ತಿಳಿದು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ. ಅಷ್ಟರಲ್ಲಿ ಬಸ್ಸು ಸುಟ್ಟು ಕರಕಲಾಗಿದೆ. ಘಟನೆ ಸಂಬಂಧ ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here