ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಇನ್ನು ಕಡ್ಡಾಯ

ಮಂಗಳೂರು: ರಾಜ್ಯದ ಎಲ್ಲಾ ಸರಕಾರಿ, ಖಾಸಗಿ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಸಂವಿಧಾನದ ಪೀಠಿಕೆ ಓದುವುದು ಇನ್ನು ಮುಂದೆ ಕಡ್ಡಾಯ. ಸಂವಿಧಾನದ ಆಶಯವನ್ನು ಎತ್ತಿ ಹಿಡಿಯುವ ಈ ಐತಿಹಾಸಿಕ ತೀರ್ಮಾನವನ್ನು ರಾಜ್ಯ ಸರ್ಕಾರ  ಸಂಪುಟ ಸಭೆಯಲ್ಲಿ ಕೈಗೊಂಡಿದೆ.

ಇದಲ್ಲದೆ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ನಗರಸಭೆ ಮತ್ತು ಪುರಸಭೆ ಸೇರಿದಂತೆ ಸರಕಾರಿ ಮತ್ತು ಅರೆಸರಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆ ಅಳವಡಿಸಬೇಕು. ಇದನ್ನು ಕಡ್ಡಾಯಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದಾಗಿ ಸಚಿವ ಎಚ್‌ ಸಿ ಮಹಾದೇವಪ್ಪ ಮಾಹಿತಿ ನೀಡಿದ್ದಾರೆ.

ನಾವೇ ಪಡೆದುಕೊಂಡಿರುವ ಸ್ವಾತಂತ್ರ್ಯವನ್ನು ಮೈಮರೆತು ಕಳೆದುಕೊಂಡರೆ ಮತ್ತೆ ಅದನ್ನು ಪಡೆಯಲಾಗದು ಎಂದು ಅಂಬೇಡ್ಕರ್ ತಿಳಿಹೇಳಿರುವುದನ್ನು ನೆನಪಿಸಿದ ಸಚಿವರು, ದೇಶ ನಿರ್ಮಾಣದಲ್ಲಿ ಯುವಜನರನ್ನು ತೊಡಗಿಸಲು ಧಾರ್ಮಿಕ ಸಮಾನತೆಯನ್ನು ಕಾಣಲು ಸಂವಿಧಾನದ ಓದು ಅಗತ್ಯವಾಗಿದೆ. ಜನರ ನೈತಿಕ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲೂ ಇದು ಅತಿ ಅಗತ್ಯವಾಗಿದೆ ಎಂಬುವುದು ಸಂಪುಟ ಸಭೆಯ ಈ ನಿರ್ಧಾರದ ಆಶಯ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here