ಜೂ.20: ಅಕ್ಕಿ ನೀಡದ ಕೇಂದ್ರದ ವಿರುದ್ದ ಕಾಂಗ್ರೆಸ್ ನಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ

ಮಂಗಳೂರು: ಬಡವರ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರಕಾರ ಅಕ್ಕಿ ನೀಡಲು ನಿರಾಕರಿಸುವುದನ್ನು ವಿರೋಧಿಸಿ ಮೋದಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಜೂ.20ರಂದು ರಾಜ್ಯದಲ್ಲೆಡೆ ಬೃಹತ್ ಪ್ರತಿಭಟನೆ  ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜೂ.20ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು, ಶಾಸಕರು, ಭಾಗವಹಿಸಲಿದ್ದಾರೆ. ಈ ಮೂಲಕ ಕೇಂದ್ರ ಸರಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ.
ಮೊದಲು ಅಕ್ಕಿ ಕೊಡುತ್ತೇವೆ ಅಂದಿದ್ದ ಎಫ್‌ಸಿಐ ಬಳಿಕ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಇದು ಉದಾಹರಣೆಯಾಗಿದೆ. ಬಡವರ ಹೊಟ್ಟೆ ಮೇಲೆ ಹೊಡೆದು, ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಕ್ಷವಾಗಿದೆ. ಹೀಗಾಗಿ ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here