ಮಂಗಳೂರು: ಮದ್ಯ ದರ ಏರಿಕೆ ಮಾಡಿಲ್ಲ, ಅಂತಹ ಯಾವುದೇ ಪ್ರಸ್ತಾವ ಅಬಕಾರಿ ಇಲಾಖೆ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆಯ ಆದೇಶ ಮಾಡಿಲ್ಲ. ಹಣಕಾಸು ಇಲಾಖೆ ಇರಬಹುದು ಅಥವಾ ಕೆಎಸ್ ಬಿಎಸ್ಎನ್ ನಲ್ಲಿ ಇರಬಹುದು, ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಚಿವರು ಹೇಳಿದ್ದಾರೆ.
ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಕ್ರೋಡೀಕರಣ ಮಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ದರ ಏರಿಕೆ ಮಾಡಲಾಗಿದೆ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿಚಾರವಾಗಿ ಮದ್ಯ ದರ ಏರಿಕೆಯನ್ನು ಸಚಿವರು ನಿರಾಕರಿಸಿದ್ದಾರೆ.