



ಮಂಗಳೂರು: ಸಾಮಾ,ದಾನ, ಭೇದ, ದಂಡ ನಾಲ್ಕನ್ನು ಬಳಸಿ ಮರುಮತಾಂತರಕ್ಕೆ ಮುಂದಾಗುವ ಅನಿವಾರ್ಯತೆ ಇದೆ. ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದಿರುವುದರಿಂದ ದೇಶ ಮತ್ತು ಹಿಂದೂ ಧರ್ಮ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲಾ ಸಮುದಾಯಗಳ ಮಠಾಧೀಶರು ಮಹಾಪಂಚಾಯತ್ ಕರೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಸಿ ಟಿ ರವಿ ಹೇಳಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸೆ, ಆಮಿಷ, ಬಲತ್ಕಾರ, ಮೋಸದ ಮತಾಂತರಕ್ಕೆ ನಿಷೇಧ ಇದೆ. ಬಲವಂತದ ಮತಾಂತರ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ಇದರ ಪರವಾಗಿ ಕಾಂಗ್ರೆಸ್ ಇದೆಯೇ? ಎಂದು ಪ್ರಶ್ನಿಸಿದ್ದಾರೆ. ನಮ್ಮನ್ನು ನಾವು ಉಳಿಸಿಕೊಳ್ಳಲು ಸುರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಬೇರೆ ಬೇರೆ ಕಾರಣಕ್ಕೆ ಹಿಂದೂ ಧರ್ಮದಿಂದ ಹೊರ ಹೋದವರನ್ನು ಮರಳಿ ಕರೆ ತರಬೇಕಾದ ಅನಿವಾರ್ಯತೆ ಇದೆ ಎಂದು ಸಿ ಟಿ ರವಿ ಹೇಳಿದ್ದಾರೆ.














