ಮಂಗಳೂರು: ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಿರುವುದನ್ನು ಖಂಡಿಸಿ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ಕದ್ರಿಯಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಹಿಂದೂ ಕಾರ್ಯಕರ್ತರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸರಕಾರದ ನಡೆಯನ್ನು ಖಂಡಿಸಿದ ಪ್ರತಿಭಟನಾಕಾರರು ಪಠ್ಯಪುಸ್ತಕದಿಂದ ಹಿಂದೂ ವಿಚಾರಧಾರೆಗಳನ್ನು ಕೈಬಿಡುವ ನಿರ್ಣಯ ಕೈಗೊಂಡಿರುವ ಸರಕಾರದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ ಎಂದು ದೂರಿದರು.ಈ ಸಂದರ್ಭ ವಿಶ್ವಹಿಂದು ಪರಿಷತ್ನ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಗೋಪಾಲ್ ಕುತ್ತಾರ್ ಸೇರಿದಂತೆ ಹಲವು ಮಂದಿ ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.