ಮಂಗಳೂರು: ಮಂಗಳೂರು ತಾಲೂಕಿನ ಹರೇಕಳ ನ್ಯೂ ಪಡ್ಪುವಿನ ಸರಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜು ಆಗಿ ಮೇಲ್ದರ್ಜೆಗೇರಿಸಲು ಹರೇಕಳ ಹಾಜಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಕ್ಷರ ಸಂತ ಹರೇಕಳ ಹಾಜಬ್ಬ ಬಳಿಕ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಅವರಿಗೂ ಮನವಿ ಸಲ್ಲಿಸಿದರು. ಈ ಕುರಿತು ಖುದ್ದು ಸಿಎಂ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಾಗಿ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು. pic.twitter.com/05eYjDPU6B
— CM of Karnataka (@CMofKarnataka) June 17, 2023