ಖಾಸಗಿ ಬಸ್ ಮತ್ತು ಬೈಕ್ ಅಪಘಾತ – ಬೈಕ್ ನಲ್ಲಿದ್ದ ಯುವಕನ ಮೃತ್ಯು – ಯುವತಿ ಗಂಭೀರ

ಮಂಗಳೂರು: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ನಲ್ಲಿದ್ದ ಯುವತಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗದಿಂದ ಉಡುಪಿ ಕಡೆಗೆ ಬೈಕಿನಲ್ಲಿ ಬರುತ್ತಿರುವ  ಸಂದರ್ಭದಲ್ಲಿ ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಬಾರ್ಕೂರು ನಿವಾಸಿ ಶಶಾಂಕ್ (21) ಎಂದು ಗುರುತಿಸಲಾಗಿದೆ. ಹಾಗೂ ಯುವಕನ ಜೊತೆಗಿದ್ದ ಯುವತಿಯನ್ನು ನಿರ್ಮಿತ (19) ಎಂದು ಗುರುತಿಸಲಾಗಿದ್ದು ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

update
ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದ ಯುವತಿ ನಿರ್ಮಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here