ಮಂಗಳೂರು: ಗೃಹಜೋತಿ ಗ್ಯಾರಂಟಿ ಸ್ಕೀಮ್ ನಲ್ಲಿ ಫ್ರೀ ಕರೆಂಟ್ ಪಡೆಯಲು ಹೆಸರು ನೋಂದಣಿ ಮಾಡಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಓಪನ್ ಆಗುತ್ತಿಲ್ಲ. ಕೇಂದ್ರ ಸರಕಾರ ನಮ್ಮ ಸರ್ವರ್ ಹ್ಯಾಕ್ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲೂ ಇದೇ ಪರಿಸ್ಥಿತಿ ಇದೆ ಎಂದು ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ಸರಿಯಾದ ತಯಾರಿ ಮಾಡಿಕೊಳ್ಳದೆ ತಪ್ಪು ಮಾಡಿದೆ. ಆ ತಪ್ಪನ್ನು ಕೇಂದ್ರ ಸರ್ಕಾರದ ಮೇಲೆ ಹೊರಿಸಿದೆ ಎಂದು ಬಿಜೆಪಿ ಆರೋಪಿಸಿದೆ.