ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್-ಹಾಲಿನ ಬೆಲೆ ಏರಿಕೆ ಸಾಧ್ಯತೆ

ಮಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್
ಅವರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ ಅಧ್ಯಕ್ಷ ಸ್ಥಾನ ಒಲಿದಿದೆ.

ಭೀಮಾ ನಾಯ್ಕ್ ಅವಿರೋಧ ಆಯ್ಕೆಯಾದ ಬೆನ್ನಲ್ಲೇ ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ. ಹಾಲಿನ ದರ ಐದು ರೂಪಾಯಿ ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ, ಬೆಲೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂಪಾಯಿ ಬೆಲೆ ಹೆಚ್ಚಿಸಲು ಬೇಡಿಕೆ ಇಟ್ಟಿದೆ. ದರ ಹೆಚ್ಚಿಸುವುದಲ್ಲದೆ ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಭೀಮಾ ನಾಯ್ಕ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here