ಹಾಲಿನ ದರ ಏರಿಕೆ ಪ್ರಸ್ತಾವ – ಪ್ರಜೆಗಳ ಜೇಬಿಗೆ ಕನ್ನ – ಬಿಜೆಪಿ ಟೀಕೆ

ಮಂಗಳೂರು: ಕೆಎಂಎಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರಿಗೆ ಐದು ರೂಪಾಯಿ ಹೆಚ್ಚಿಸುತ್ತೇವೆ ಎಂದು  ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಲು ಹೊರಟಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರದಲ್ಲಿ ಈಗಾಗಲೇ ದಿನಬಳಕೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಇದೀಗ ಹಾಲಿನ ದರವನ್ನು ಏರಿಸುವ ಮೂಲಕ ರಾಜ್ಯದ ಬಡ ಜನರ ಮೇಲೆ ಬರೆ ಎಳೆಯುತ್ತಿದೆ. ಈ ಜನದ್ರೋಹಿ ನಿರ್ಧಾರದಿಂದ ಸರಕಾರ ದೂರ ಉಳಿಯಬೇಕೆಂದು ಬಿಜೆಪಿ ಆಗ್ರಹಿಸುತ್ತದೆ ಎಂದಿದೆ.

LEAVE A REPLY

Please enter your comment!
Please enter your name here