ಮಂಗಳೂರು: ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಕಡ್ಡಾಯವಾಗಿ ಆಚರಿಸುವಂತೆ ಸೂಚನೆ ಹೊರಡಿಸಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ. ಯಾವುದೇ ಜಾತಿ, ಧರ್ಮ ಮತ್ತು ಭಾಷೆಗೆ ಸೀಮಿತವಾಗದಂತೆ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ ಎಂದವರು ಹೇಳಿದ್ದಾರೆ.
ಜೊತೆಗೆ ರಾಜ್ಯ ಸರ್ಕಾರ ಮೂವರು ಸಾಧಕರಿಗೆ ಈ ಬಾರಿಯ ಕೆಂಪೇಗೌಡ ಪ್ರಶಸ್ತಿಯನ್ನು ನೀಡುತ್ತಿದೆ. ಸಾಧಕರ ಆಯ್ಕೆ ಜವಾಬ್ದಾರಿಯನ್ನು ಕಾಂಗ್ರೆಸ್ ಮುಖಂಡ ಬಿ ಎಲ್ ಶಂಕರ್ ಅವರಿಗೆ ವಹಿಸಲಾಗಿದೆ. ಉಳಿದಂತೆ ಬೆಂಗಳೂರು ವ್ಯಾಪ್ತಿಯ ವಾರ್ಡ್ ಸಂಖ್ಯೆ 198ಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ಇಷ್ಟೇ ಪ್ರಮಾಣದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಈ ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 9 ರಂದು ನಡೆಯಲಿದೆ.