ತುಂಬೆ ವೆಂಟೆಡ್ ಡ್ಯಾಂ – ನೀರಿನ ಮಟ್ಟ ಹೆಚ್ಚಳ

ಮಂಗಳೂರು: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರಕ್ಕೆ ಕುಡಿಯುವ ನೀರು ಪೂರೈಸುವ ನೇತ್ರಾವತಿ ನದಿಗೆ ಅಡ್ಡಲಾಗಿರುವ ತುಂಬೆ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ತುಂಬೆ ವೆಂಟೆಡ್ ಡ್ಯಾಂ ನಲ್ಲಿ 5 ಮೀ. ನೀರಿನಮಟ್ಟ ಕಾಯ್ದುಕೊಳ್ಳಲಾಗುತ್ತಿದ್ದು, ಸದ್ಯ ಮಂಗಳೂರು ನಗರಕ್ಕೆ ಕುಡಿಯುವ ನೀರಿನ ಅಭಾವ ದೂರವಾಗಿದೆ. ನೀರಿನ ಅಭಾವ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಮೇ.4 ರಿಂದ ನೀರಿನ ರೇಷನಿಂಗ್ ಆರಂಭ ಮಾಡಲಾಗಿತ್ತು. ಮಂಗಳೂರು ನಗರ ಪ್ರದೇಶ, ಸುರತ್ಕಲ್ ಪ್ರದೇಶಕ್ಕೆ ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದರು.

LEAVE A REPLY

Please enter your comment!
Please enter your name here