ಮಂಗಳೂರು: ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಪ್ರತ್ಯೇಕ ಆ್ಯಪ್ ಗೆ ಸಚಿವ ಸಂಪುಟದಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಿಎಂ ಸಿದ್ದರಾಮಯ್ಯ ಅವರಿಗೆ ಆ್ಯಪ್ ಬಗ್ಗೆ ವಿವರಣೆ ನೀಡಿದ್ದಾರೆ. ಅಲ್ಲದೆ ಪ್ರತ್ಯೇಕ ಆ್ಯಪ್ ಬಗ್ಗೆ ಇತರ ಸಂಪುಟ ಸಚಿವರಿಗೂ ಮಾಹಿತಿ ನೀಡಿದರು. ಬಳಿಕ ಆ್ಯಪ್ ಬಳಸಲು ಗ್ರೀನ್ ಸಿಗ್ನಲ್ ನೀಡಲಾಯಿತು. ಆದರೆ ಅರ್ಜಿ ಸಲ್ಲಿಕೆ ಯಾವ ದಿನಾಂಕದಿಂದ ಆರಂಭವಾಗುತ್ತದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಯೋಜನೆ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಆಗಸ್ಟ್ ನಲ್ಲಿ ಮಹಿಳೆಯರ ಖಾತೆಗೆ ಹಣ ಬೀಳುವ ಸಾಧ್ಯತೆ ಇದೆ.