ದಿಲ್ಲಿ ವಿವಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೆಟ್ರೋದಲ್ಲಿ ತೆರಳಿದ ಪ್ರಧಾನಿ

ಮಂಗಳೂರು: ದಿಲ್ಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ದಿಲ್ಲಿ ಮೆಟ್ರೋದಲ್ಲಿ ತೆರಳಿದರು.

ವಿಶ್ವವಿದ್ಯಾನಿಲಯದ ಸಂಸ್ಥಾಪನ ದಿನದ ಸಂದರ್ಭದಲ್ಲಿ ಮೇ.1 2022 ರಂದು ಆರಂಭಿಸಲಾದ ಡಿ ಯು ಶತಮಾನೋತ್ಸವದ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಮೋದಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ.

ಲೋಕಕಲ್ಯಾಣ ಮಾರ್ಗ ಮೆಟ್ರೋ ನಿಲ್ದಾಣದಿಂದ ವಿಶ್ವವಿದ್ಯಾಲಯ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸವಾರಿ ಮಾಡುವಾಗ ಪ್ರಧಾನಿ ಮೋದಿ ಸಾಮಾನ್ಯ ಪ್ರಯಾಣಿಕರಂತೆ ಮೆಟ್ರೋದಲ್ಲಿ ಕುಳಿತು ಜನರೊಂದಿಗೆ ಸಂವಹನ ನಡೆಸುತ್ತಿರುವುದು ಕಂಡು ಬಂದಿದೆ. ಯುವಕರು ನನ್ನ ಸಹ ಪ್ರಯಾಣಿಕರಾಗಿರುವುದಕ್ಕೆ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿರುವ ಪ್ರಧಾನಿಯವರು ಮೆಟ್ರೋ‌ ಕೋಚ್ ನೊಳಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here