ಮಂಗಳೂರು: ರಾಜ್ಯದಲ್ಲಿ ಸಾಕಷ್ಟು ಮಳೆ ಬಂದು ಜಲಪ್ರಳಯವಾಗುತ್ತದೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸ್ವಾಮೀಜಿ ವಿಪರೀತವಾದ ಜಲಪ್ರಳಯದಿಂದ ಜಾಗತಿಕ ಮಟ್ಟದಲ್ಲಿ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲೋ ಹಾಕಿದ ಬಾಂಬು ನಮ್ಮ ರಾಷ್ಟ್ರದ ಜನರ ಮೇಲೆ ಪರಿಣಾಮ ಬೀರುತ್ತದೆ. ವಿಜಯದಶಮಿಯಿಂದ ಸಂಕ್ರಾಂತಿಯವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಇದು ಬಹುದೊಡ್ಡ ದುರ್ಘಟನೆಯಾಗಿದ್ದು ಕರುನಾಡಿಗೆ ಕೆಲವೊಂದು ಆಪತ್ತು ಇದೆ. ಕೆಲವು ಸಾವು ನೋವು ಸಂಭವಿಸುತ್ತವೆ. ಗೌರಿಶಂಕರ ಶಿವ ಶಿವ ಎಂದಿತು. ಭೂಮಿ ನಡುಗಿತು. ಮಳೆ ಬೆಳೆ ತಲ್ಲಣಗೊಂಡಿತು. ಜನರು ತೊಂದರೆಗೆ ಒಳಗಾಗುವರು. ನಾನು ಹೇಳಿದಾಗ ಒಂದು ಘಟನೆ ಆಗಿಯೇ ಆಗುತ್ತದೆ. ಅದನ್ನು ತಪ್ಪಿಸಿಕೊಳ್ಳುವುದು ಆಳುವವರ ಕೈಯಲ್ಲಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.