ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮಂಗಳೂರು(ಹೊಸದಿಲ್ಲಿ): ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ ಎನ್ ಸಿ ಪಿ ನಾಯಕ ಹಾಗೂ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ತನ್ನ ಪಕ್ಷದ 9 ಶಾಸಕರ ಬೆಂಬಲದೊಂದಿಗೆ ಇಂದು ಮಹಾರಾಷ್ಟ್ರದ ಏಕನಾಥ ಶಿಂಧೆ ನೇತೃತ್ವದ ಸರಕಾರವನ್ನು ಸೇರಿದ್ದು, ರಾಜಭವನದಲ್ಲಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪವಾರ್ ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿ ಸ್ಥಾನ ಹಂಚಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಪವಾರ್ ಈ ಹೆಜ್ಜೆ ಇಟ್ಟಿದ್ದಾರೆ.

ಅಜಿತ್ ಪವಾರ್ ರವಿವಾರ ತನ್ನ ನಿವಾಸದಲ್ಲಿ ಎನ್ ಸಿ ಪಿ ಶಾಸಕರ ತುರ್ತು ಸಭೆ ಕರೆದ ನಂತರ ಅವರು ರಾಜಭವನಕ್ಕೆ ಆಗಮಿಸಿದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ರಾಜಭವನಕ್ಕೆ ಆಗಮಿಸಿದರು. ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರ ಅಧಿಕೃತ ಬಂಗಲೆ ‘ದೇವಗಿರಿ’ಯಲ್ಲಿ ನಡೆದ ಸಭೆಯಲ್ಲಿ ಒಟ್ಟು 54 ಎನ್ ಸಿ ಪಿ ಶಾಸಕರ ಪೈಕಿ ಸುಮಾರು 30 ರಿಂದ 40 ಶಾಸಕರು ಭಾಗವಹಿಸಿದ್ದರು ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here