ಮಂಗಳೂರು: ನಗರದಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ನಗರದ ಪಂಪ್ ವೆಲ್ ಜಲಾವೃತಗೊಂಡಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿವೆ. ಮಳೆಗೆ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಅಡಿಭಾಗದಲ್ಲಿ ಸಂಪೂರ್ಣ ಮಳೆ ನೀರು ತುಂಬಿದ್ದು ಜಲಾವೃತಗೊಂಡಿದೆ. ಇದರಿಂದ ವಾಹನ ಸಂಚಾರಕ್ಕೆ ತೊಡಕಾಗಿದೆ.
ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿರುವುದರಿಂದ ಪೊಲೀಸರು ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿದ್ದಾರೆ. ವಾಹನಗಳು ನಗರದ ವೆಲೆನ್ಸಿಯಾ, ಜಪ್ಪಿನಮೊಗರು ಮೂಲಕ ಸಂಚರಿಸುತ್ತಿದ್ದು ಅಲ್ಲಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳ ದಟ್ಟನೆಯಿಂದ ಆ್ಯಂಬುಲೆನ್ಸ್ ಸಂಚಾರಕ್ಕೂ ತೊಡಕಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಕಳೆದ 2 ಗಂಟೆಯಿಂದ ನಿರಂತರವಾಗಿ ಇಲ್ಲಿ ಮಳೆ ಸುರಿಯುತ್ತಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ