ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 4ರ ಮಂಗಳವಾರ ಮಂಗಳೂರು, ಮುಲ್ಕಿ, ಉಳ್ಳಾಲ ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಕರಾವಳಿಯಲ್ಲಿ ಬಾರಿ ಮಳೆಯಾಗುತ್ತಿದ್ದು ಮುಂದಿನ ನಾಲ್ಕು ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡದಲ್ಲಿ ತಹಶೀಲ್ದಾರ್ ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿಯೂ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.