ಮಂಗಳೂರು( ಹುಬ್ಬಳ್ಳಿ ) : ವ್ಯಕ್ತಿಯರು ಇರುವ ಬುರ್ಖಾ ಧರಿಸಿ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಲಾಭ ಪಡೆಯಲು ಪ್ರಯತ್ನಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶೀ ಗ್ರಾಮದ ಬಸ್ ನಿಲ್ದಾಣದಲ್ಲಿ ಬುರ್ಖಾ ಹಾಕಿದ ವ್ಯಕ್ತಿ ಪತ್ತೆಯಾಗಿದ್ದು ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಯಾಗಿರುವ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.
ವೀರಭದ್ರಯ್ಯ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿರುವ ಅನುಮಾನ ವ್ಯಕ್ತವಾಗಿದೆ. ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಭಿಕ್ಷಾಟನೆ ಮಾಡುವ ಉದ್ದೇಶದಿಂದ ತಾನು ಬುರ್ಖಾ ಧರಿಸಿರುವುದಾಗಿ ವೀರಭದ್ರಯ್ಯ ಹೇಳಿಕೊಂಡಿದ್ದಾನೆ.