ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಹರಿದ ಕಾರು – ನಾಲ್ವರಿಗೆ ಗಾಯ

ಮಂಗಳೂರು: ತೊಕ್ಕೊಟ್ಟು ಸಮೀಪದ ಗುತ್ತಾರೋ ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ಕಾರೊಂದು ಅಪಘಾತಕ್ಕೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬೆಳಗ್ಗಿನ ಜಾವ 3.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯಲ್ಲಿ ಉರುಳಿ ಬಿದ್ದಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು ತಿಳಿದು ಬಂದಿದೆ. ಕಾರು ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟಿನತ್ತ ಸಂಚರಿಸುತ್ತಿತ್ತು ಎಂದು ಹೇಳಲಾಗಿದ್ದು, ಕಾರಿನಲ್ಲಿದ್ದವರ ವಿವರ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here