ಇಂಜಿನಿಯರ್ ಮನೆಯಲ್ಲಿ 7 ಇವಿಎಂ ಕಂಟ್ರೋಲ್ ಯುನಿಟ್ ಗಳು ಪತ್ತೆ

ಮಂಗಳೂರು (ದೊಡ್ಡಬಳ್ಳಾಪುರ): ಇಂಜಿನಿಯರ್ ಒಬ್ಬರ ಮನೆಯನ್ನು ನೆಲಸಮ ಮಾಡುವ ಸಂದರ್ಭದಲ್ಲಿ 7 ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ ಕಂಟ್ರೋಲ್ ಯುನಿಟ್ ಗಳು ಪತ್ತೆಯಾಗಿದೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದುಡಪನ ಹಳ್ಳಿ ಗ್ರಾಮದ ಮನೆಯಲ್ಲಿ ಈ ಇವಿಎಂ ಕಂಟ್ರೋಲ್ ಯೂನಿಟ್ ಗಳು ಪತ್ತೆಯಾಗಿದ್ದು, ಈ ಮನೆ ದೊಡ್ಡ ಬಳ್ಳಾಪುರ ನಿರ್ಮಿತಿ ಕೇಂದ್ರದ ಇಂಜಿನಿಯರ್ ಶಿವಕುಮಾರ್ ಅವರದ್ದಾಗಿದೆ ಎಂದು ತಿಳಿದು ಬಂದಿದೆ. ಇದು 2018ರ ಚುನಾವಣೆಯಲ್ಲಿ ಬಳಸಿ ತಿರಸ್ಕೃತಗೊಂಡಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಗಳಾಗಿವೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೋಹನ ಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ನೆಲಸಮಗೊಳಿಸಲಾಗಿದೆ. ಈ ಮನೆಯಿಂದ ಏಳು ಇವಿಎಂ ಗಳನ್ನು ವಶಕ್ಕೆ ಪಡೆದ ತಹಶೀಲ್ದಾರ್ ಅವುಗಳನ್ನು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ಹಸ್ತಾಂತರಿಸಿ ಮುಂದಿನ ಕ್ರಮಕ್ಕಾಗಿ ವರದಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here