ಮಂಗಳೂರು (ಶ್ರೀಲಂಕಾ): ಶ್ರೀಲಂಕಾ ಪ್ರವಾಸದಲ್ಲಿರುವ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಅವರಿಗೆ ಲಘು ಹೃದಯಘಾತವಾಗಿದೆ.
ಕೊಲಂಬೊದಲ್ಲಿರುವ ಅವರನ್ನು ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. 83 ವರ್ಷದ ಕಸ್ತೂರಿರಂಗನ್ ಸುಮಾರು ಒಂದು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀಲಂಕಾದಲ್ಲಿ ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿರಂಗನ್ ಅವರಿಗೆ ಹೃದಯಘಾತವಾಗಿರುವ ವಿಷಯ ತಿಳಿದು ನೋವಾಗಿದೆ ಶೀಘ್ರವೇ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದಾರೆ.