



ಮಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರಕಾರ ಪಿತೂರಿ ರೂಪಿಸುತ್ತಿದ್ದು ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ನಗರದಲ್ಲಿ ಮೌನ ಪ್ರತಿಭಟನೆ ಆರಂಭಿಸಲಾಯಿತು.







ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಬಳಿಯ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜೆ ಆರ್ ಲೋಬೋ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಉತ್ತರ ಪ್ರದೇಶದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಾಜಿ ಸಚಿವ ನಕುಲ್ ದುಬೇ ಸಹಿತ ಹಲವಾರು ಸ್ಥಳೀಯ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.














