ಮಾದಕ ವಸ್ತು ಮಾರಾಟಕ್ಕೆ ಯತ್ನ – ಇಬ್ಬರ ಬಂಧನ

ಮಂಗಳೂರು: ನಗರದ ಹೊರವಲಯದ ಪಡು ಶೆಟ್ಟಿ ಗ್ರಾಮದ ಮೂಡು ಶಿದ್ದೆಯ ಬಳಿ ಮಾದಕ ವಸ್ತು ಎಂಡಿಎಂಎ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಪಿಲಿಕುಳ ಸಮೀಪದ ನಿವಾಸಿ ಶಾರುಕ್(27) ಮತ್ತು ತೋಕೂರಿನ ಜಗದೀಶ(45) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, 3 ಮಾರಕ ಆಯುಧಗಳು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 4,41,700 ರೂಪಾಯಿ ಎಂದು ಅಂದಾಜಿಸಲಾಗಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here