ಗೃಹಲಕ್ಷ್ಮಿ ಗೆ ಅರ್ಜಿ ಸಲ್ಲಿಕೆ ಆರಂಭ – ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ಹಣ ಜಮಾ

ಮಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆ ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here