ಬಿಜೆಪಿ ಶಾಸಕರ ಅಮಾನತು ಖಂಡಿಸಿ ಸ್ಪೀಕರ್‌ ಕಛೇರಿ ಬಳಿ ಪ್ರತಿಭಟನೆ-ಯತ್ನಾಳ್‌ ಅಸ್ವಸ್ಥ

ಮಂಗಳೂರು:  ವಿಧಾನಸಭೆಯಿಂದ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅಸ್ವಸ್ಥಗೊಂಡ ಘಟನೆ ನಡೆದಿದೆ.

ಶಾಸಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ ಸ್ಪೀಕರ್ ಖಾದರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸ್ಪೀಕರ್ ಕಚೇರಿ ಮೆಟ್ಟಿಲು ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಸದಸ್ಯರನ್ನು ವಿಧಾನಸಭೆ ಭದ್ರತಾ ಸಿಬ್ಬಂದಿಗಳು ಹೊತ್ತೋಯ್ದಿದ್ದಾರೆ. ಈ ವೇಳೆ ಸಿಬ್ಬಂದಿ ಮತ್ತು ಶಾಸಕರ ಮಧ್ಯೆ ವಾಗ್ವಾದ ನಡೆದಿದೆ. ಯತ್ನಾಳ್ ಅವರನ್ನು ಭದ್ರತಾ ಸಿಬ್ಬಂದಿ ಹೊತ್ತೋಯ್ಯುವಾಗ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ರಕ್ತದೊತ್ತಡದಲ್ಲಿ ಏರಿಳಿತವಾಗಿ ಅವರು ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಬಳಿಕ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here