ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ ಮತ್ತು ಸ್ಪೀಕರ್

ಮಂಗಳೂರು ( ಬೆಂಗಳೂರು ): ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಯತ್ನಾಳ್ ಅಸ್ವಸ್ಥಗೊಂಡಿದ್ದರು. ಅವರನ್ನು ತಕ್ಷಣವೇ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಯತ್ನಾಳ್ ಆರೋಗ್ಯ ಸ್ಥಿರವಾಗಿದೆ.

LEAVE A REPLY

Please enter your comment!
Please enter your name here