ಮಾದಕ ವಸ್ತು ಮಿಶ್ರಿತ ನೂರು ಕೆಜಿ ಚಾಕಲೇಟ್ ವಶ

ಮಂಗಳೂರು : ನಗರದ ಎರಡು ಕಡೆಗಳಲ್ಲಿ ದಾಳಿ ನಡೆಸಿರುವ ಪಾಂಡೇಶ್ವರ ಪೊಲೀಸರು ನೂರು ಕೆಜಿಯಷ್ಟು ಮಾದಕ ವಸ್ತು ಮಿಶ್ರಿತ ಚಾಕಲೇಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ ರಥ ಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಪಳ್ಳಿರಿನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋಂಕರ್ ಎಂಬಾತ ಮಾದಕ ವಸ್ತು ಮಿಶ್ರಿತ ಬಾಂಗ್ ಎಂಬ ಚಾಕಲೇಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಟ್ಟು ನೂರು ಕೆಜಿ ಚಾಕಲೇಟ್ ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಚಾಕಲೇಟನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು ವರದಿ ಆಧಾರದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here