ಮಂಗಳೂರು(ಬೆಂಗಳೂರು): ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ದೆಹಲಿಯಲ್ಲಿ ಬಿಜೆಪಿ ವರಿಷ್ಠರಾದ ಕೇಂದ್ರ ಗ್ರಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ದಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.
ಪ್ರತಿಪಕ್ಷ ನಾಯಕರ ಸ್ಥಾನಕ್ಕೆ ಆಯ್ಕೆ ಬಾಕಿ ಇದ್ದು ಹೊಸ ರಾಜ್ಯಾಧ್ಯಕ್ಷರ ನೇಮಕ ಕುರಿತ ಚರ್ಚೆಯು ನಡೆಯುತ್ತಿದೆ. ಈ ವೇಳೆ ವಿಜಯೇಂದ್ರ ಅವರು ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.