ಭಾರೀ ಮಳೆ ಹಿನ್ನಲೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

ಮಂಗಳೂರು (ಸುಬ್ರಹ್ಮಣ್ಯ): ಸುರಿಯುತ್ತಿರುವ ಭಾರೀ ಮಳೆ ಕಾರಣದಿಂದಾಗಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ.

ಶುಕ್ರವಾರ ರಾತ್ರಿಯಿಂದಲೇ ಸುರಿಯುತ್ತಿರುವ ಭಾರೀ ಮಳೆಯ ಕಾರಣದಿಂದ ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ. ಇದರಿಂದಾಗಿ ಕುಮಾರಧಾರ ಸ್ನಾನಘಟ್ಟ ಹಾಗೂ ಕಿಂಡಿ ಆಣೆಕಟ್ಟು ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಭಕ್ತಾದಿಗಳಿಗೆ ನೀರಿಗಳಿಗೆ ಸೂಚನೆ ನೀಡಲಾಗಿದ್ದು, ನದಿ ತಟದಲ್ಲಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here