ರಾಜ್ಯದ‌ ಹಲವು ಜಿಲ್ಲೆಗಳಲ್ಲಿ ಮಳೆ-ತಗ್ಗು ಪ್ರದೇಶಗಳು ಮುಳುಗಡೆ-ಇನ್ನೂ 5 ದಿನ ಮಳೆ

ಮಂಗಳೂರು(ಬೆಂಗಳೂರು): ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಮಳೆ ಮುಂದುವರೆದಿದ್ದು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ನದಿಪಾತ್ರದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಕೊಡಗಿನ ಭಾಗಮಂಡಲದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಸಿಲೆ, ಅಡ್ಡಹೊಳೆ‌ ಮೊದಲಾದ ಕಡೆಗಳಲ್ಲಿ ಮಳೆಯಾಗಿದ್ದು, ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಉತ್ತರ ಕನ್ನಡದ ಹೊನ್ನಾವರದ ಗುಂಡಬಾಳ ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

LEAVE A REPLY

Please enter your comment!
Please enter your name here