ಉತ್ತರಾಖಂಡ: ಭಾರೀ ಮಳೆ, ಮೇಘ ಸ್ಫೋಟ

ಮಂಗಳೂರು(ಉತ್ತರಕಾಶಿ): ಇಲ್ಲಿನ ಹಲವು ಸ್ಥಳಗಳಲ್ಲಿ ಭಾರೀ ಮಳೆ ಹಾಗೂ ಮೇಘ ಸ್ಫೋಟ ಸಂಭವಿಸಿರುವುದರಿಂದ ಹಲವು ರಸ್ತೆ, ಮನೆ ಹಾಗೂ ಅಂಗಡಿಗಳಿಗೆ ಹಾನಿ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪ್ರಾಣಹಾನಿ ಬಗ್ಗೆ ಯಾವುದೇ ವರದಿ ಆಗಿಲ್ಲ.

ಉತ್ತರಕಾಶಿ ಜಿಲ್ಲಾಧಿಕಾರಿ ಅಭಿಷೇಕ್ ರುಹೇಲಾ ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿಯಿಂದ ಪರಿಸ್ಥಿತಿ ಕುರಿತಂತೆ ವರದಿ ಪಡೆದಿದ್ದು, ಜನಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸುವಂತೆ ಹಾಗೂ ಸಂತ್ರಸ್ತ ಜನರಿಗೆ ಪರಿಹಾರ ನೀಡುವಂತೆ ರುಹೇಲಾ ಅವರು ಎಲ್ಲ ಉಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಾರ್ಕೋಟ್ ತೆಹ್ಸಿಲ್ನ ಗಂಗನಾನಿಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರವಾಸಿ ಧಾಮದ ಕೆಲವು ಗುಡಿಸಲುಗಳಿಗೆ ಹಾನಿ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೆಲವೆಡೆ ಭೂಕುಸಿತ ಸಂಭವಿಸಿದ ಪರಿಣಾಮ ಬಾರ್ಕೋಟ್ ಹಾಗೂ ಗಂಗಾನಾನಿ ನಡುವೆ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಹಲವು ಸ್ಥಳಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಪುರೋಲಾದ ಛಾರಾ ಖಾಡ್ನಲ್ಲಿ ಕೂಡ ಮೇಘ ಸ್ಪೋಟ ಹಾಗೂ ಭೂಕುಸಿತ ಸಂಭವಿಸಿದೆ. ರಸ್ತೆ ಬದಿ ನಿಲ್ಲಿಸಲಾಗಿದ್ದ ಹಲವು ವಾಹನಗಳು ಮಣ್ಣಿನ ಅಡಿ ಹೂತು ಹೋಗಿವೆ. ಸಂತ್ರಸ್ತ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಧುಂತ್ರಿ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು, ಈ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

LEAVE A REPLY

Please enter your comment!
Please enter your name here