ಮಂಗಳೂರು: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೆಗೆ ಸುಪ್ರೀಂ ಕೋರ್ಟ್ ಸೋಮವಾರ ತಾತ್ಕಾಲಿಕ ತಡೆ ನೀಡಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಜುಲೈ 26ರ ಸಂಜೆ 5 ಗಂಟೆಯವರೆಗೆ ನಡೆಸದಂತೆ ಸುಪ್ರೀಂ ಕೋರ್ಟ್, ತಾತ್ಕಾಲಿಕವಾಗಿ ತಡೆಹಿಡಿದು ಆದೇಶ ನೀಡಿದೆ.
ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ತೆರಳಲು ಸುಪ್ರೀಂ ಕೋರ್ಟ್ ಮುಸ್ಲಿಂ ಅರ್ಜಿದಾರರಿಗೆ ಬುಧವಾರದವರೆಗೆ ಕಾಲಾವಕಾಶ ನೀಡಿದೆ. ಸಮೀಕ್ಷೆ ನಡೆಸುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯವು ಕಳೆದ ಶನಿವಾರ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ, ಸೋಮವಾರ ಬೆಳಗ್ಗೆಯೇ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ 30 ಸದಸ್ಯರ ತಂಡ ಸಮೀಕ್ಷೆ ಆರಂಭಿಸಿತ್ತು. ಈ ನಡುವೆಯೇ ಸುಪ್ರೀಂ ಕೋರ್ಟ್, ತಾತ್ಕಾಲಿಕ ತಡೆ ನೀಡಿದೆ.